ಲೋಕಬಂಧು ನ್ಯೂಸ್ | ಉಜಿರೆ
ಆರೋಗ್ಯ ರಕ್ಷಣೆಗೆ ಭಜನೆ ಉತ್ತಮ ಹಾದಿಯಾಗಿದ್ದು, ಸುಗಮ ಬದುಕಿನ ದಾರಿಯೇ ಭಜನೆಯಾಗಿದೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಸೆ.29 ಮಂಗಳವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಎರಡನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಜನೆಯಿಂದ ಸಾಮಾಜಿಕ ಪರಿವರ್ತನೆ, ಕೌಟುಂಬಿಕ ಸಾಮರಸ್ಯ ಹಾಗೂ ಒಳ್ಳೆಯ ನಡತೆಗಳುಂಟಾಗಿ ಸಮಾಜದಲ್ಲಿ ತಲೆದೋರಿರುವ ಸಾಮಾಜಿಕ ಸಮಸ್ಯೆಗಳು ದೂರವಾಗುತ್ತದೆ. ಭವಿಷ್ಯದ ಹಾದಿಯನ್ನು ತಪ್ಪಿಸುವ ದುಶ್ಚಟಗಳನ್ನು ತ್ಯಜಿಸಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಲು ಭಜನೆ ಸಹಕಾರಿ ಎಂದರು.
ವರ್ಣ ಜಾಗೃತಿ, ಮದ್ಯ ವರ್ಜನ ಶಿಬಿರ ಹಾಗೂ ಭಜನಾ ಕಮ್ಮಟದಂಥ ಹಲವಾರು ಯೋಜನೆಗಳ ಮೂಲಕ ಹೆಗ್ಗಡೆ ದಂಪತಿ ಸಾವಿರಾರು ಜನರ ಪಾಲಿಗೆ ನೆರಳಾಗಿ ನಿಂತು ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಭಜನಾ ಕಮ್ಮಟ ಪರಿಷತ್ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆ, ಉಪಾಧ್ಯಕ್ಷೆ ಡಾ.ಹೇಮಾವತಿ ವೀ.ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಐಶ್ವರ್ಯ ನಿಶ್ಚಲ್ ಜೈನ್ ಉಪಸ್ಥಿತರಿದ್ದರು.
.jpg)
.jpg)
.jpg)