ಧರ್ಮಸ್ಥಳದಲ್ಲಿ ಭಜನಾ ತರಬೇತಿ

ಲೋಕಬಂಧು ನ್ಯೂಸ್ | ಉಜಿರೆ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲ ದಿನ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನಡೆಯಿತು.
ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು. ಭಜನೆಯ ಸ್ವರ, ಲಯ, ತಾಳ ಹಾಗೂ ಗಾಯನ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿ, ಪ್ರಾಯೋಗಿಕ ತರಬೇತಿ ನಡೆಸಿಕೊಟ್ಟರು.


ಶಿಬಿರಾರ್ಥಿಗಳಿಗೆ ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಕಾರ್ಯದರ್ಶಿ ವೀರು ಶೆಟ್ಟಿ ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಪರಿಚಯ ನೀಡಿದರು.


ಸಂಜೆ ಕಾರ್ಕಳ ಸಾಲ್ಮರ ಶ್ರೀ ವೆಂಕಟರಮಣ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಡಿ.ಹರ್ಷೇಂದ್ರ ಕುಮಾರ್ ಹಾಗೂ ಐಶ್ವರ್ಯ ನಿಶ್ಚಲ್ ಉಪಸ್ಥಿತರಿದ್ದರು.