ಸೆ.28ರಿಂದ ಧರ್ಮಸ್ಥಳದಲ್ಲಿ ಭಜನಾ ಕಮ್ಮಟ

ಲೋಕಬಂಧು ನ್ಯೂಸ್ | ಉಜಿರೆ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಸೆ.28ರಿಂದ ಅ.4ರ ವರೆಗೆ ನಡೆಯಲಿದೆ.
ಸೆ.28ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಜನಾ ಕಮ್ಮಟದ ಉದ್ಘಾಟನೆ ನಡೆಯಲಿದ್ದು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತರಿರುವರು.


ಶ್ರೀ ಧ.ಮಂ. ಭಜನಾ ಪರಿಷತ್ ಉಪಾಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.


ಅ.4ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತರಿವರು.


ಶಾಸಕ ಹರೀಶ್ ಪೂಂಜಾ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಾ.ಹೇಮಾವತಿ ವೀ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾ‌ರ್, ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಭಜನಾ ಕಮ್ಮಟ ಸಂಚಾಲಕ ಜಿ.ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಶ್ರೀ ಧ.ಮಂ. ಪ್ರಾದೇಶಿಕ ಭಜನಾ ಪರಿಷತ್‌ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬನ್ನೂರು ಮೊದಲಾದವರು ಉಪಸ್ಥಿತರಿರುವರು.