ಲೋಕಬಂಧು ನ್ಯೂಸ್ | ಹಿರಿಯಡಕ
ಇಲ್ಲಿಗೆ ಸಮೀಪದ ಶೀರೂರು ಮೂಲ ಮಠದಲ್ಲಿ ಪರ್ಯಾಯ ಪೀಠಾಧೀಶ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಿಸಲುದ್ದೇಶಿದ್ದು, ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
