ಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಲೋಕಬಂಧು ನ್ಯೂಸ್ | ನವದೆಹಲಿ, ಸೆ.23
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವವಾಸ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.


ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ದೊಡ್ಡ ಗೌರವ ಲಭಿಸಿದೆ.