ದಸರಾ ಕ್ರೀಡಾಕೂಟಕ್ಕೆ ಚಾಲನೆ

ಲೋಕಬಂಧು ನ್ಯೂಸ್ ಉಡುಪಿ, ಸೆ.13
ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಯಶಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದವರು ಆಶಿಸಿದರು.


ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮತ್ತು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮುಖ್ಯ ಅತಿಥಿಗಳಾಗಿದ್ದರು.


ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನಿರೂಪಿಸಿದರು.