ದಸರಾ ಕ್ರೀಡಾಕೂಟಕ್ಕೆ ಚಾಲನೆ

ಲೋಕಬಂಧು ನ್ಯೂಸ್ | ಉಡುಪಿ, ಸೆ.20
ಜಿಲ್ಲಾಡಳಿತ ಉಡುಪಿ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಯಶಪಾಲ್ ಸುವರ್ಣ ಭಾನುವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು.
ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರುವಂತೆ ಶಾಸಕ ಯಶಪಾಲ್ ಶುಭ ಹಾರೈಸಿದರು.


ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರು ಮುಖ್ಯ ಅತಿಥಿಗಳಾಗಿದ್ದರು. ಕುಂದಾಪುರ ಹಾಗೂ ಕಾಪು ತಾಲೂಕು ಕ್ರೀಡಾಧಿಕಾರಿಗಳಾದ ಸತ್ಯನಾರಾಯಣ ಜಿ. ಹಾಗೂ ರವೀಂದ್ರ ನಾಯ್ಕ ಇದ್ದರು.


ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.