ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಂಭ್ರಮದ ಚೌತಿ

ಲೋಕಬಂಧು ನ್ಯೂಸ್ ಉಡುಪಿ, ಸೆ.14
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರಸನ್ನ ಗಣಪತಿ ಸನ್ನಿಧಾನದಲ್ಲಿ ಸೋಮವಾರ ಗಣೇಶ ಚತುರ್ಥಿ‌ಯನ್ನು ಸಂಭ್ರಮದಿಂದ ಆಚರಿಸಲಾಯಿತು.ಅಷ್ಟೋತ್ತರ ಶತ ನಾರಿಕೇಳ  ಗಣಪತಿಯಾಗ ಕೊರಂಗ್ರಪಾಡಿ ರಾಘವೇಂದ್ರ ಭಟ್ ನೇತ್ರತ್ವದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು.
ಮೂಡು ಗಣಪತಿ ಸೇವೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗಪೂಜೆ  ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ ತಿಳಿಸಿದ್ದಾರೆ.