ಲೋಕಬಂಧು ನ್ಯೂಸ್ | ಬೆಂಗಳೂರು, ಸೆ.15
ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್‌ಗಳ ದಿನ ಆಚರಣೆ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದರು.
ನಗರದ ಕೆ.ಆರ್.ವೃತ್ತದಲ್ಲಿ ಮಂಗಳವಾರ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಸರ್ಕಾರದ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ಇಂಜಿನಿಯರ್‌ಗಳು ತಯಾರಾಗುತ್ತಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್‌ಗಳಿದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ.
ಎಲ್ಲಾ ಇಂಜಿನಿಯರ್‌ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಅದರ ರೂಪುರೇಖೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಅಭಿವೃದ್ಧಿಗೆ ಅಡಿಪಾಯ
ಇಂಜಿನಿಯರ್‌ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತಗೊಳಿಸುತ್ತಿರುವವರು ಇಂಜಿನಿಯರ್‌ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್‌ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್‌ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಸರ್ ಎಂ.ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ ಎಂದು ಸಿಎಂ ಡಿಕೆಶಿ ತಿಳಿಸಿದರು.
.jpg)
.jpg)