ಸಂಭ್ರಮದ ಕಿನ್ನಿಮೂಲ್ಕಿ ಗಣೇಶೋತ್ಸವ

ಲೋಕಬಂಧು ನ್ಯೂಸ್ | ಉಡುಪಿ, ಸೆ.15
ಕನ್ನರ್ಪಾಡಿ– ಕಿನ್ನಿಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮೂಲ್ಕಿಯ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವ ಶ್ರದ್ಧಾಭಕ್ತಿಭಾವದಿಂದ ಆಚರಿಸಲಾಗುತ್ತಿದೆ.
ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ಧೂಮ್ರವರ್ಣದ ಶ್ರೀ ವಿಘ್ನವಿನಾಯಕನಿಗೆ ವಿಶೇಷ ಪೂಜೆ ನಡೆಸಲಾಗುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯುತ್ತಿದೆ. ಮಹಾಗಣಪತಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.


ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ನೇತೃತ್ವದ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಮಹೋತ್ಸವದ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.