ಲೋಕಬಂಧು ನ್ಯೂಸ್ | ಶೃಂಗೇರಿ, ಸೆ.6
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನೃಸಿಂಹವನದ ಗುರು ಭವನದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ವಿಶೇಷ ಪೂಜೆ ನೆರವೇರಿಸಿ, ಚಂದ್ರೋದಯ ಕಾಲದಲ್ಲಿ ಅರ್ಘ್ಯ ಪ್ರದಾನ ಮಾಡಿದರು. ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ಸಾನ್ನಿಧ್ಯ ವಹಿಸಿದ್ದರು.
ಮೊಸರು ಕುಡಿಕೆ ಉತ್ಸವವನ್ನೂ ಸಂಭ್ರಮದಿಂದ ಆಚರಿಸಲಾಯಿತು. ಮಹೋತ್ಸವ ಅಂಗವಾಗಿ ಶ್ರೀಮದ್ಭಾಗವತ ಸಪ್ತಾಹ ನಡೆಸಲಾಗುತ್ತಿದೆ.
