ಲೋಕಬಂಧು ನ್ಯೂಸ್ | ಮೂಡುಬಿದಿರೆ, ಸೆ.24
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 1 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಠದ ಶ್ರೀ ಈಶವಿಠಲದಾಸ ಸ್ವಾಮೀಜಿ, ತುಳುವಿಗೆ ಪ್ರಾಶಸ್ತ್ಯ ನೀಡಿರುವುದಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಾಸ್ತವವಾಗಿ ನಮ್ಮ ಮಠಗಳೆಲ್ಲ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳಾಗಿವೆ. ಇಂಥ ಗ್ರಾಮೀಣ ಪ್ರದೇಶದ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಸ್ವಾಮೀಜಿ ಹೇಳಿದ್ದಾರೆ.
