ಲೋಕಬಂಧು ನ್ಯೂಸ್ ಉಡುಪಿ
ಡಾ.ಶಿವರಾಮ ಕಾರಂತರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ ಘನತೆ ತಂದವರು. ಸ್ವಾತಂತ್ರ್ಯ ಪೂರ್ವದಲ್ಲಿ ನಾಡಿನ ಸಮಾನತೆಯನ್ನು ಪ್ರತಿಪಾದಿಸಿದವರು. ವೈಚಾರಿಕ ಚಿಂತನೆಯ ಕೊಂಡಿಯಾಗಿರುವ ಕಾರಂತರು ಕರ್ನಾಟಕದ ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆಯ ಪ್ರತಿನಿಧಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಕಾರ್ಯಕ್ರಮಗಳ ಕುರಿತಾದ ವಾರ್ತಾ ಸಂಚಯ ಬಿಡುಗಡೆಗೊಳಿಸಿ ಮಾತನಾಡಿದರು.
ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಕಾರಂತರ 125ನೇ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ಅನುದಾನದ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸಚಿವರನ್ನು ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಸನ್ಮಾನಿಸಿದರು.
ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಟ್ರಸ್ಟ್‌ನ ಸದಸ್ಯ ಜಿ.ಎಂ. ಶರೀಫ್ ಹೂಡೆ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.