ಲೋಕಬಂಧು ನ್ಯೂಸ್ ಉಡುಪಿ, ಸೆ.14
ವಿಜಯಾ ಬ್ಯಾಂಕ್ ನಿವೃತ್ತ ಅಧಿಕಾರಿ ಇಂದ್ರಾಳಿ ನಿವಾಸಿ ಕೊಡಂಕೂರು ಜಯರಾಮ ಶೆಟ್ಟಿ (74) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು.ಬ್ಯಾಂಕ್ ಸೇವೆಯಿಂದ ನಿವೃತ್ತರಾದ ಬಳಿಕ ಉಡುಪಿಯಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು.
ಉಡುಪಿಯ ನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದ ಅವರು, ಪ್ರಸ್ತುತ ನಿರ್ದೇಶಕರಾಗಿದ್ದರು.
ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಉಡುಪಿ- ಇಂದ್ರಾಳಿ ಅಧ್ಯಕ್ಷರೂ ಆಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.