ಪೇಜಾವರ ಶ್ರೀಗಳನ್ನು ಭೇಟಿಯಾದ ಸಚಿವ ಕುಮಾರಸ್ವಾಮಿ

ಲೋಕಬಂಧು ನ್ಯೂಸ್ ನವದೆಹಲಿ, ಸೆ.22
ಇಲ್ಲಿನ ವಸಂತ್ ಕುಂಜ್ ಪೇಜಾವರ ಶಾಖಾಮಠವಾದ ವೇದವ್ಯಾಸ ಗುರುಕುಲದ ಶ್ರೀಕೃಷ್ಣ ಧಾಮದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಭಾರೀ ಕೈಗಾರಿಕೆ ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.ಇದೇ ಸಂದರ್ಭದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡಾ ಶ್ರೀಪಾದರನ್ನು ಭೇಟಿ ಮಾಡಿದರು.