ಲೋಕಬಂಧು ನ್ಯೂಸ್ | ಕಾಪು, ಸೆ.20
ಇಲ್ಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪೌರಾಡಳಿತ ಇಲಾಖೆ ಸಚಿವ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಸಿ.ಬಾಲಕೃಷ್ಣ ಮಾಗಡಿ ಕುಟುಂಬ ಸಮೇತರಾಗಿ ಭೇಟಿ ನೀಡಿ ಪತ್ನಿ ಮತ್ತು ಮಕ್ಕಳೊಂದಿಗೆ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ದೇವಳದ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.
ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ದೇವಳದ ಜೀರ್ಣೋದ್ಧಾರ ಕಾರ್ಯ ನಡೆದು ಬಂದ ಹಾದಿ ಮತ್ತು ಭಕ್ತರ ಪಾಲ್ಗೊಳ್ಳುವಿಕೆ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಮನೋಹರ್ ರಾವ್ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷೆ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.
