ಲೋಕಬಂಧು ನ್ಯೂಸ್ | ಬೆಂಗಳೂರು, ಸೆ.10
ವಿವಿಧ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕವಾಗಿದ್ದು, ನೂತನ ಅಧ್ಯಕ್ಷರ ಪಟ್ಟಿಯನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜಿ. ವೇಣುಗೋಪಾಲ್ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಗೆ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಪದ್ಮರಾಜ್ ರಾಮಯ್ಯ ಕಳೆದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದರು.
ಉಡುಪಿ ಜಿಲ್ಲೆಗೆ ಬಂಟ ಸಮುದಾಯದವರನ್ನು ಆಯ್ಕೆ ಮಾಡಿದರೆ, ದ.ಕ. ಜಿಲ್ಲೆಗೆ ಬಿಲ್ಲವ ಸಮಾಜದವರನ್ನು ಆಯ್ಕೆ ಮಾಡಲಾಗಿದೆ.
ಉಭಯ ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ಮಂದಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಿದ್ದರು.

.jpg)
.jpg)