ಪೇಜಾವರ ಶ್ರೀಗಳಿಂದ ಅರ್ಘ್ಯ ಪ್ರದಾನ

ಲೋಕಬಂಧು ನ್ಯೂಸ್ | ನವದೆಹಲಿ, ಸೆ.5
ಇಲ್ಲಿನ ವಸಂತ್ ಕುಂಜ್'ನಲ್ಲಿರುವ ಪೇಜಾವರ ಶಾಖಾಮಠ ವೇದವ್ಯಾಸ ಗುರುಕುಲದ ಶ್ರೀಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ನಿರತರಾಗಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶುಕ್ರವಾರ ರಾತ್ರಿ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು.
ಅದಕ್ಕೂ ಪೂರ್ವದಲ್ಲಿ ಶ್ರೀಮಠದ ಉಪಾಸ್ಯದೇವರಾದ ಶ್ರೀವಿಠಲ ಕೃಷ್ಣ ಹಾಗೂ ರಾಮದೇವರಿಗೆ ವಿಶೇಷ ಪೂಜೆ ನಡೆಸಿದರು.
ಕೃಷ್ಣಾರ್ಘ್ಯ ಪ್ರದಾನದ ಬಳಿಕ ಚಂದ್ರನಿಗೆ ಅರ್ಘ್ಯ ನೀಡಿದರು.


ಅನೇಕ ಮಂದಿ ಭಕ್ತರು ಭಾಗವಹಿಸಿದ್ದರು.