ಲೋಕಬಂಧು ನ್ಯೂಸ್ | ಉಡುಪಿ, ಸೆ.6
ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಅವರು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಅವರನ್ನು ಶ್ರೀ ದೇವಳದ ವತಿಯಿಂದ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ದೇವಳದ ಅರ್ಚಕ ಮದುಸೂಧನ್ ಉಪಾಧ್ಯಾಯ ಅವರು ಶ್ರೀದೇವರ ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ಗೌರವಿಸಿದರು.
ದೇವಳದ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೋರಿ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಲಾಗಿದ್ದು, ಮನವಿಗೆ ಸ್ಪಂದಿಸಿದ ಅವರು ಸರ್ಕಾರದಿಂದ ಗರಿಷ್ಠ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಭಾಕರ್ ಶೆಟ್ಟಿ, ದಿನೇಶ್ ಪುತ್ರನ್, ಶೇಖರ್ ಶೆಟ್ಟಿ, ಸುದೇಶ್ ಶೇಟ್, ರಾಜೇಶ್ ಬನ್ನಂಜೆ, ಶಮಿತಾ ಎಸ್. ಭಂಡಾರಿ ಮತ್ತು ವಿದ್ಯಾಲತಾ ಶೆಟ್ಟಿ ಹಾಗೂ ದೇವಳದ ವ್ಯವಸ್ಥಾಪಕ ರವಿರಾಜ್ ಭಟ್ ಮೊದಲಾದವರಿದ್ದರು.
.jpg)
.jpg)