ಲೋಕಬಂಧು ನ್ಯೂಸ್ | ನವದೆಹಲಿ, ಸೆ.24
ಇಲ್ಲಿನ ವಸಂತ್ ಕುಂಜ್ ಪೇಜಾವರ ಶಾಖಾಮಠ ವೇದವ್ಯಾಸ ಗುರುಕುಲದ ಶ್ರೀಕೃಷ್ಣ ಧಾಮದಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ಮಾಜಿ ಉಪಪ್ರಧಾನಿ ಎಲ್.ಕೆ. ಆಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಉತ್ತಮ ಆರೋಗ್ಯ ಪ್ರಾಪ್ತಿಯಾಗುವಂತೆ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಡ್ವಾಣಿ ಪುತ್ರಿ ಪ್ರತಿಭಾ ಅವರು ಶ್ರೀಪಾದರನ್ನು ಬರಮಾಡಿಕೊಂಡರು. ಅಶ್ವಿನ್ ಕುಮಾರ್ ಜೊತೆಗಿದ್ದರು.
