ರ‍್ಯಾಪಿಡ್ ಚೆಸ್ ಟೂರ್ನಮೆಂಟ್

ಲೋಕಬಂಧು ನ್ಯೂಸ್ | ಕಾಪು, ಸೆ.19
ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ‌ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಕಾಪು ಹಳೆ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ರ‍್ಯಾಪಿಡ್ ಚೆಸ್ ಟೂರ್ನಮೆಂಟ್–2026 ಆಯೋಜಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ, ಚೆಸ್'ನಂಥ ಬೌದ್ಧಿಕ ಕ್ರೀಡೆಗಳು ಯುವಜನರಲ್ಲಿ ಚಿಂತನಾ ಶಕ್ತಿ, ಏಕಾಗ್ರತೆ ಹಾಗೂ ನಿರ್ಧಾರ ಸಾಮರ್ಥ್ಯ ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇಂಥ ಸ್ಪರ್ಧೆಗಳ ಮೂಲಕ ಪ್ರತಿಭಾವಂತ ಆಟಗಾರರನ್ನು ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಹೈದರ್, ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ನಜೀರ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ಮೊದಲಾದವರಿದ್ದರು.