ಕೃಷ್ಣಮಠಕ್ಕೆ ರವಿ ಶಾಸ್ತ್ರಿ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಸೆ.25
ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಕಾರ ರವಿ ಶಾಸ್ತ್ರಿ ಅವರು ಗುರುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.