ಅಕಲಂಕ ದತ್ತಿ ಪುರಸ್ಕಾರಕ್ಕೆ ಆಯ್ಕೆ

ಲೋಕಬಂಧು ನ್ಯೂಸ್ ಉಡುಪಿ
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ ನೀಡುವ ಡಾ.ಉಪ್ಪಂಗಳ ರಾಮ ಭಟ್ಟ ಮತ್ತು ಶಂಕರಿ ಆರ್. ಭಟ್ಟ ಪ್ರಾಯೋಜಿತ ಅಕಲಂಕ ದತ್ತಿ ಪುರಸ್ಕಾರ ಪ್ರಕಟವಾಗಿದ್ದು, 2025ನೇ ಸಾಲಿನ ಪುರಸ್ಕಾರಕ್ಕೆ ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹಾಗೂ 2026ನೇ ಸಾಲಿನ ಪುರಸ್ಕಾರಕ್ಕೆ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ತಲಾ 15 ಸಾವಿರ ರೂ. ಮತ್ತು ಸನ್ಮಾನ ಒಳಗೊಂಡಿದ್ದು ಅಕ್ಟೋಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಮತ್ತು ನರೇಂದ್ರ ಕುಮಾರ್ ಕೋಟ ಪ್ರಕಟಣೆ ತಿಳಿಸಿದೆ.