ಲೋಕಬಂಧು ನ್ಯೂಸ್ ಹಿರಿಯಡಕ
ಪ್ರಜಾಸೇವೆ ಇಲಾಖೆ ಮತ್ತು ಉಡುಪಿ ತಾಲೂಕು ಆಡಳಿತ ವತಿಯಿಂದ ಹಿರಿಯಡಕ ದೇವಾಡಿಗ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 38 ಅರ್ಜಿ ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಾಮಾಜಿಕ ಭದ್ರತಾ ಯೋಜನೆಗಳ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್,ಉಡುಪಿ ತಹಶೀಲ್ದಾರ್ ಗುರುರಾಜ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಪೊಲೀಸ್ ಉಪ ಅಧೀಕ್ಷಕ ಬೆಳ್ಳಿಯಪ್ಪ, ಆಡಳಿತಾಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.