ಲೋಕಬಂಧು ನ್ಯೂಸ್ ಪಡುಬಿದ್ರಿ, ಸೆ.13
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರ ವರೆಗೆ ನಡೆಯುವ 5ನೇ ವರ್ಷದ ಉಡುಪಿ- ಉಚ್ಚಿಲ ಪಂಚಮ ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ.ಜಿ ಶಂಕರ್ ಅವರು ಬಿಡುಗಡೆಗೊಳಿಸಿದರು.ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಲಾಯಿತು.ಬಳಿಕ ಮಾತನಾಡಿದ ಡಾ.ಜಿ.ಶಂಕರ್, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇತಿಮಿತಿಯಲ್ಲಿ ಈ ಬಾರಿಯ 5ನೇ ವರ್ಷದ ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಕಳೆದ ಬಾರಿಯಂತೆ ಈ ಬಾರಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷ ಆಕರ್ಷಣೆಗಳು ಇರಲಿವೆ.
ಸಕ್ಕರೆ ಮತ್ತು ಜವಳಿ ಖಾತೆ ಸಚಿವ ರುದ್ರಪ್ಪ ಎಂ. ಲಮಾಣಿ ದಸರಾ ಉತ್ಸವ ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಆರೋಗ್ಯ ಸಚಿವ ಯು.ಟಿ.ಖಾದರ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.
ಈ ಬಾರಿಯೂ ಶೋಭಾಯಾತ್ರೆ ಈ ಹಿಂದಿನ ದಸರಾದಂತೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದರು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ ಮಲ್ಪೆ ಮಾತನಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ರತ್ನಾಕರ್ ಸಾಲ್ಯಾನ್ ಮಲ್ಪೆ, ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ. ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಸುಗುಣ ಎಸ್. ಕರ್ಕೇರ, ಸುಧಾಕರ್ ಕುಂದರ್ ಬಂಕೇರ್ ಕಟ್ಟ, ದಿನೇಶ್ ಎರ್ಮಾಳು, ಯಜ್ಞೇಶ್ ಕರ್ಕೇರ, ಕವಿತಾ ಶರತ್, ಉದಯ ಕುಮಾರ್ ಹಟ್ಟಿಯಂಗಡಿ, ಶಂಕರ್ ಸಾಲ್ಯಾನ್, ಮನೋಜ್ ಉಳ್ಳಾಲ, ಸತೀಶ್ ಕುಂದರ್ ಕೈಪುಂಜಾಲು, ಸುಭಾಷ್ ಕಾಂಚನ್, ಯುವರಾಜ್ ಕಿದಿಯೂರು, ರವೀಶ್ ಕೊರವಾಡಿ, ಮನೋಜ್ ಕಾಂಚನ್ ಎರ್ಮಾಳ್, ದಿನೇಶ್ ಮೂಳೂರು, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ಶಿವಪ್ಪ ಕಾಂಚನ್ ಮಲ್ಪೆ, ಸತೀಶ್ ಕುಂದರ್ ಮಲ್ಪೆ, ನಾರಾಯಣ ಸಿ. ಕರ್ಕೇರ, ಸತೀಶ್ ಸಾಲ್ಯಾನ್ ಎರ್ಮಾಳ್, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಮೊದಲಾದವರಿದ್ದರು.