ಲೋಕಬಂಧು ನ್ಯೂಸ್ | ಮಣಿಪಾಲ, ಸೆ.3
ಬಾಲ್ಯ ಕ್ಯಾನ್ಸರ್ ಜಾಗೃತಿ ಮಾಸ ಅಂಗವಾಗಿ ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ವಿಭಾಗದ ವತಿಯಿಂದ ವಿಂಗ್ಸ್ ಆಫ್ ಹೋಪ್ ಕಾರ್ಯಕ್ರಮ ನಡೆಯಿತು.
ಹಾವಂಜೆಯ ಮಣಿಪಾಲ ಹಾಸ್ಪೈಸ್ ಆ್ಯಂಡ್ ರೆಸ್ಪೈಟ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಸುಮಾರು 65 ಮಕ್ಕಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತೆ, ನಟಿ ರೂಪಶ್ರೀ ವರ್ಕಾಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮಕ್ಕಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಅವರು ಶ್ಲಾಘಿಸಿದರು.
ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಧಾಕರ್ ಕಂಟಿಪುಡಿ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳಿಗಾಗಿ ಕಥೆ ಹೇಳುವಿಕೆ, ಒರಿಗಾಮಿ, ಸೃಜನಶೀಲ ಬರವಣಿಗೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
'ಸ್ಮೃತಿ' ಗೋಡೆ ಅನಾವರಣ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.
ಡಾ.ಸೀಮಾ ರಾಜೇಶ್ ರಾವ್, ಡಾ.ವಾಸುದೇವ ಭಟ್ ಕೆ., ಡಾ.ಎಮಿನ್, ಎ.ರಹಿಮಾನ್ ಮೊದಲಾದವರಿದ್ದರು.