ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಯೂಟ್ಯೂಬರ್'ಗಳ ಆಟಾಟೋಪ!

ಲೋಕಬಂಧು ನ್ಯೂಸ್ | ಬೆಳ್ತಂಗಡಿ, ಸೆ.20
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಗೆ ಅಕ್ರಮವಾಗಿ ಪ್ರವೇಶ ಮಾಡಿ ವೀಡಿಯೊ ಚಿತ್ರೀಕರಣ ಮಾಡಲು ಮುಂದಾದ ಅಭಿಷೇಕ್ ಮತ್ತು  ಶ್ರೇಯಸ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ ಮೀಸಲು ಅರಣ್ಯ ಪ್ರದೇಶವಾದ ಬಂಗ್ಲೆಗುಡ್ಡೆಗೆ ಅಕ್ರಮ ಪ್ರವೇಶ ಮಾಡಿದ್ದನ್ನು ಸ್ಥಳೀಯರು ಮಾಹಿತಿ ನೀಡಿದ್ದರು.


ಧರ್ಮಸ್ಥಳ ಠಾಣೆಯ ಪೊಲೀಸರು ವಿಚಾರಣೆ ನಡೆಸಿದರು.