ಅ.10ರಂದು ಸಂಜೆ ಉಡುಪಿ ಉಚ್ಚಿಲ ದಸರಾ ದೀಪಾಲಂಕಾರ ಉದ್ಘಾಟನೆ

ಲೋಕಬಂಧು ನ್ಯೂಸ್ | ಪಡುಬಿದ್ರಿ
ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರ ಮತ್ತು ಸಹಯೋಗದೊಂದಿಗೆ ಅ.11ರಿಂದ 21ರ ವರೆಗೆ ನಡೆಯುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ‌ ಮಹೋತ್ಸವ ಪ್ರಯುಕ್ತ ಮಹಾಲಕ್ಷ್ಮೀ ದೇವಸ್ಥಾನದ ಪರಿಸರ ಹಾಗೂ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದ ವರೆಗೆ ಆಯೋಜಿಸಲಾಗಿರುವ ಅತ್ಯಾಕರ್ಷಕ ವಿದ್ಯುದ್ದೀಪಾಲಂಕಾರ ವ್ಯವಸ್ಥೆಯನ್ನು ಅ.10ರಂದು ಸಂಜೆ 6.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುವುದು ಎಂದು ದಸರಾ ರೂವಾರಿ ನಾಡೋಜ ಡಾ.ಜಿ. ಶಂಕರ್‌ ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಪ್ರಕಟಣೆ ತಿಳಿಸಿದೆ.