ಅ.12: ಉಚ್ಚಿಲ ದಸರಾಕ್ಕೆ ಸಿಎಂ ಡಿಕೆಶಿ ಭೇಟಿ

ಲೋಕಬಂಧು ನ್ಯೂಸ್ | ಪಡುಬಿದ್ರಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಅಕ್ಟೋಬರ್ 12ರಂದು ಅಪರಾಹ್ನ 4 ಗಂಟೆಗೆ ಶ್ರೀಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳಕ್ಕೆ ಆಗಮಿಸಿ ಉಡುಪಿ ಉಚ್ಚಿಲ ದಸರಾ ವೈಭವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ ಉಚ್ಚಿಲ ದಸರಾ ರೂವಾರಿ ನಾಡೋಜ ಡಾ.ಜಿ. ಶಂಕರ್ ಮತ್ತು ದ. ಕ. ಮೊಗವೀರ ಮಹಾಜನ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಚ್ಚಿಲಕ್ಕೆ ಆಗಮಿಸಲಿರುವ ಸಿಎಂ ಡಿ.ಕೆ.ಶಿವಕುಮಾರ್‌ ಆಗಮನದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.


ದಸರಾ ಪ್ರಯುಕ್ತ ನಡೆಯುತ್ತಿರುವ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲಿರುವ ಮುಖ್ಯಮಂತ್ರಿ, ದಸರಾ ಅಂಗವಾಗಿ ಆಯೋಜಿಲಾಗುವ ವಸ್ತುಪ್ರದರ್ಶನಕ್ಕೂ ಭೇಟಿ ನೀಡಲಿದ್ದಾರೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಪ್ರಕಟಣೆ ತಿಳಿಸಿದೆ.