ಲೋಕಬಂಧು ನ್ಯೂಸ್ ಪಡುಬಿದ್ರಿ
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವದ ಹತ್ತನೇ ದಿನ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರೇಕ್ಷಕರ ಮನಗೆದ್ದಿತು.ದಸರಾ ಮುಖ್ಯ ವೇದಿಕೆಯಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ನೃತ್ಯ ವೈವಿಧ್ಯ ಅನಾವರಣಗೊಂಡಿತು.ಈ ಸಂದರ್ಭದಲ್ಲಿ ಡಾ.ಮೋಹನ ಆಳ್ವ ಅವರನ್ನು ಉಚ್ವಿಲ ದಸರಾ ರೂವಾರಿ ನಾಡೋಜ ಡಾ.ಜಿ.ಶಂಕರ್ ಗೌರವಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನಿಲ್, ಮಹಾಜನ ಸಂಘದ ಮಹಿಳಾಧ್ಯಕ್ಷೆ ಕವಿತಾ ಶರತ್, ದ.ಕ. ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ನಾಲ್ಕುಪಟ್ಣ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣ ಕರ್ಕೇರ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಮೊದಲಾದವರಿದ್ದರು.