ಅಂಗನವಾಡಿ ಶಿಕ್ಷಕಿಯರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ

ಲೋಕಬಂಧು ನ್ಯೂಸ್ ಉಡುಪಿ
ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ 25 ವರ್ಷಗಳ ರಾಷ್ಟ್ರ ಸೇವೆಯ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ ಸೇವಾ ಸಂಕಲ್ಪ ಅಭಿಯಾನ ಅಂಗವಾಗಿ ಆಯೋಜಿಸಿದ್ದ 'ಅಂಗಳದ ಉತ್ಸವ' ಕಾರ್ಯಕ್ರಮದಲ್ಲಿ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಡುಪಿ ನಗರ ವ್ಯಾಪ್ತಿಯ 115 ಅಂಗವಾನವಾಡಿ ಕೇಂದ್ರಗಳ ಶಿಕ್ಷಕಿಯರು ಹಾಗೂ ಸಹಾಯಕರಿಗೆ ಅಭಿನಂದಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಯಶಪಾಲ್ ಸುವರ್ಣ ಅವರು ಅಂಗನವಾಡಿ ಶಿಕ್ಷಕಿಯರನ್ನು ಸನ್ಮಾನಿಸಿ, ನರೇಂದ್ರ ಮೋದಿ ಆಶಯದಂತೆ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಪೂರ್ವ ಪ್ರಾಥಮಿಕ ಶಿಕ್ಷಣದ ಜೊತೆಗೆ ಗರ್ಭಿಣಿಯರು ಹಾಗೂ ಬಾಣಂತಿಯರ ಆರೈಕೆಯಲ್ಲಿ ವಿಶೇಷ ಕೊಡುಗೆ ನೀಡುತ್ತಿರುವ ಅಂಗನವಾಡಿ ಶಿಕ್ಷಕಿಯರ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸುವ ಕಾರ್ಯ ಅರ್ಥಪೂರ್ಣ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೂ ಸರಕಾರಿ ಉದ್ಯೋಗದ ಎಲ್ಲಾ ಸೌಲಭ್ಯಗಳು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪಕ್ಷದ ಪ್ರಮುಖರಾದ ಸಂಧ್ಯಾ ರಮೇಶ್,‌ ಶಿಲ್ಪಾ ಜಿ. ಸುವರ್ಣ, ಕಿರಣ್ ಕುಮಾರ್ ಬೈಲೂರು, ಪ್ರಭಾಕರ ಪೂಜಾರಿ, ಶ್ರೀಕಾಂತ ನಾಯಕ್ ಅಲೆವೂರು, ರೇಷ್ಮಾ ಉದಯ ಶೆಟ್ಟಿ, ಶ್ಯಾಮಲಾ ಕುಂದರ್ ಮೊದಲಾದವರಿದ್ದರು.