ಲೋಕಬಂಧು ನ್ಯೂಸ್ | ಕುಂದಾಪುರ
ಅವರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ತನ್ನ 14ನೇ ವಯಸ್ಸಿಗೆ ಯಕ್ಷಗಾನ ಕ್ಷೇತ್ರ ಪ್ರವೇಶಿಸಿ ನಾಲ್ಕು ದಶಕಗಳ ಕಾಲ ಈ ಕ್ಷೇತ್ರದಲ್ಲಿ ಕಲಾಸೇವೆಗೈದಿದ್ದಾರೆ.
ಕಳವಾಡಿ, ನಾಗರಕೋಡಿಗೆ, ಸಾಲಿಗ್ರಾಮ, ಗೋಳಿಗರಡಿ, ಹಾಲಾಡಿ, ಮಂದಾರ್ತಿ, ಮಾರಣಕಟ್ಟೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು.
ಎಲ್ಲಾ ರೀತಿಯ ಸ್ತ್ರೀ ಪೌರಾಣಿಕ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಕಲಾರಸಿಕರ ಪ್ರೀತಿಗೆ ಪಾತ್ರರಾಗಿದ್ದರು.
ಅವರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
