ಲೋಕಬಂಧು ನ್ಯೂಸ್ ಬೆಂಗಳೂರು
ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ನಗರದ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವೈದ್ಯರ ತಂಡ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ತಪಾಸಣೆ ನಡೆಸುತ್ತಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.