ಸರ್ಕಾರದ ವತಿಯಿಂದ ಮಧ್ವಾಚಾರ್ಯರ ಜಯಂತಿ ಆಚರಣೆ

ಲೋಕಬಂಧು ನ್ಯೂಸ್ | ಬೆಂಗಳೂರು
ದ್ವೈತ ಮತ ಸಂಸ್ಥಾಪಕ ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕನ್ನಡ ‌ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಈ ಬಾರಿ ಅ.21ರಂದು ವಿಜಯ ದಶಮಿಯಂದು ಮಧ್ವಾಚಾರ್ಯ ಜಯಂತಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.


ಮಧ್ವಾಚಾರ್ಯರ ಜಯಂತಿ ಆಚರಣೆ ಬಗ್ಗೆ ಕಲ್ಬುರ್ಗಿ ಬ್ರಾಹ್ಮಣ ಸಂಘ ರಾಜ್ಯ ಸರ್ಕಾರಕ್ಕೆ ಮನವಿ‌ ಮಾಡಿತ್ತು.