ಕಾಪು ಹೊಸಮಾರಿಗುಡಿ ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಲೋಕಬಂಧು ನ್ಯೂಸ್ | ಕಾಪು
ಪ್ರಸಿದ್ಧ ಶಕ್ತಿ ಸಾನ್ನಿಧ್ಯಗಳಲ್ಲಿ ಒಂದಾದ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ಕೊರಂಗ್ರಪಾಡಿ, ಶ್ರೀನಿವಾಸ್ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ನವದುರ್ಗಾ ಲೇಖನ ಮಂಟಪದಲ್ಲಿ ಲೇಖನ ಬರೆಯುವ ಮೂಲಕ ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಲಾಯಿತು.
ಮಹೋತ್ಸವಕ್ಕೆ ಚಾಲನೆ ನೀಡಿದ ಮೂಡುಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಬಹಳ ಪುರಾತನ ಸಂಸ್ಕೃತಿ ಇರುವ ಕಾಪು ಹೊಸಮಾರಿಗುಡಿವದೇವಳ ದೇಶಕ್ಕೇ ಮಾದರಿಯಾಗಿದೆ. ನವದುರ್ಗಾ ಲೇಖನ ಎಂಬ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಡಿನ ಭಕ್ತರು ಪಾಲ್ಗೊಳ್ಳಬೇಕು' ಎಂದು ಆಶಿಸಿದರು.
ಮುಂಬೈ ಉದ್ಯಮಿ ತೋನ್ಸೆ ಆನಂದ್ ಎಂ. ಶೆಟ್ಟಿ ಮಾತನಾಡಿ, ಮಾರಿಯಮ್ಮನ ಶಕ್ತಿ ಅಪಾರ. ಎಂಥಾ ಕಷ್ಟವನ್ನೂ ದೂರ ಮಾಡುವ ಶಕ್ತಿ ಈ ಜಗನ್ಮಾತೆಗಿದೆ ಎಂದರು.


ಈ ಸಂದರ್ಭದಲ್ಲಿ ಮಾಹೆ ಮಣಿಪಾಲ ಸಹಕುಲಾಧಿಪತಿ ಡಾ. ಎಚ್.ಎಸ್.ಬಳ್ಳಾಲ್ , ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಆರ್ಗ್ಯಾನಿಕ್ ಇಂಡಸ್ಟ್ರೀಸ್ ಪ್ರೈ.ಲಿ ಮುಂಬೈ ಆಡಳಿತ ನಿರ್ದೇಶಕ ಆನಂದ್ ಎಂ. ಶೆಟ್ಟಿ ತೋನ್ಸೆ, ವಿಕೆ ಗ್ರೂಪ್ ಆಫ್ ಕಂಪನೀಸ್ ಮುಂಬೈ ಆಡಳಿತ ನಿರ್ದೇಶಕ ಕೆ. ಎಂ. ಶೆಟ್ಟಿ, ಮಾಹೆ ಮಣಿಪಾಲ ಸಹಕುಲಾಧಿಪತಿ ಡಾ. ಎಚ್.ಎಸ್.ಬಳ್ಳಾಲ್, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು, ಗೌರವ ಸಲಹೆಗಾರ ಉದಯ ಕುಮಾರ್ ಶೆಟ್ಟಿ ಮುನಿಯಾಲ್,  ಕೆ. ವಿಶ್ವನಾಥ್, ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಮತ್ತು ಮಾಧವ ಆರ್. ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಧಾರ್ಮಿಕ ಸಮಿತಿ ಪ್ರಧಾನ ಸಂಚಾಲಕ ಕೆ. ಭಗವಾನ್ ದಾಸ್, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಸಾವಿತ್ರಿ ಗಣೇಶ್, ಪ್ರಧಾನ ಕಾರ್ಯದರ್ಶಿ ಗೀತಾಂಜಲಿ ಎಂ. ಸುವರ್ಣ, ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ಮನೋಹರ್ ರಾವ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಕೊಡವೂರು ಸಾಯಿಬಾಬಾ ಮಂದಿರದ ಟ್ರಸ್ಟಿ ದಿವಾಕರ ಶೆಟ್ಟಿ ಕೊಡವೂರು, ಸುಧಾಕರ ಶೆಟ್ಟಿ ಮಕರ, ಡಾ. ಪ್ರಶಾಂತ್ ಶೆಟ್ಟಿ ಕಾಪು, ಬೀನಾ ವಿ.ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಅನುರಾಧ ಮನೋಹರ್ ಶೆಟ್ಟಿ, ಕಾಪು ಜಯರಾಮ್ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರ್ಮಲ್ ಕುಮಾರ್ ಹೆಗ್ಡೆ ಮತ್ತು ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ. ಕೆ.ವಾಸುದೇವ ಶೆಟ್ಟಿ ಸ್ವಾಗತಿಸಿ, ಧನ್ಯವಾದಗೈದರು.