ಲೋಕಬಂಧು ನ್ಯೂಸ್ | ಉಡುಪಿ
ಮೂಲ್ಕಿ ತಾಲೂಕು ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉಡುಪಿ ತಾಲೂಕು ಕಚೇರಿ ಬಳಿಯ ಸನಿಲ್ ಪ್ಲಾಝಾ ಕಟ್ಟಡದಲ್ಲಿ ಭಾನುವಾರ ಪ್ರಾರಂಭಗೊಂಡಿತು.
ನೂತನ ಶಾಖೆಯನ್ನು ಮೂಲ್ಕಿ ಸೀಮೆಯ ಅರಸರಾದ ಎಂ.ದುಗ್ಗಣ್ಣ ಸಾವಂತ ಉದ್ಘಾಟಿಸಿ, ಸಹಕಾರಿ ರಂಗದ ದಿ.ಎಚ್. ನಾರಾಯಣ ಸನಿಲ್ ಹಳೆಯಂಗಡಿ ಮತ್ತು ಪಂಜದಗುತ್ತು ದಿ. ಶಾಂತಾರಾಮ ಶೆಟ್ಟಿ ಪ್ರೇರಣೆಯಂತೆ ಕಳೆದ ಐದು 5 ವರ್ಷದ ಹಿಂದೆ ಹಳೆಯಂಗಡಿಯಲ್ಲಿ ಪ್ರಾರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಸಹಕಾರ ನೀಡುತ್ತಿದೆ.ಸಂಘದ ಅಧ್ಯಕ್ಷ ವಸಂತ್ ಬೆರ್ನಾರ್ಡ್ ಹಾಗೂ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದ ನೇತೃತ್ವದಲ್ಲಿ ಪ್ರಗತಿಯತ್ರ ಸಾಗುತ್ತಿದೆ. ಸಂಸ್ಥೆ ಇನ್ನಷ್ಟು ಪ್ರಗತಿ ಸಾಧಿಸಿ ರಾಜ್ಯ ಮಟ್ಟದಲ್ಲಿ ವಿಸ್ತರಿಸಲಿ ಎಂದು ಹಾರೈಸಿದರು.
ಜ್ಯೋತಿ ಬೆಳಗಿದ ಮಾಜಿ ಸಚಿ ಕೆ.ಅಭಯಚಂದ್ರ ಜೈನ್, ಸಹಕಾರಿ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸರಿಸಮಾನವಾಗಿ ಸ್ಪರ್ಧೆ ನೀಡುತ್ತಿದ್ದು, ಮಹಿಳೆಯರಿಗೆ ಉದ್ಯೋಗಾವಕಾಶ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಯಶಸ್ವಿಯಾಗಿದೆ ಎಂದರು.
ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಶ್ರೀಧರ್ ದೇವಾಡಿಗ, ಉಡುಪಿ ಪಡುಕುತ್ಯಾರ್ ಸರಸ್ವತಿ ಕೋ ಆಪರೇವಿಟ್ ಸೊಸೈಟಿ ಅಧ್ಯಕ್ಷ ಬಿ.ಸೂರ್ಯಕುಮಾರ್, ಹೋಮಿಯೋಪಥಿಕ್ ಫಿಸಿಷಿಯನ್ ಡಾ ಬೆರಿಲ್ ಎ.ಬೆರ್ನಾರ್ಡ್, ಮೂಲ್ಕಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷೆ ಶರ್ಲಿ ಸುಮಾಲಿನಿ, ಕಟ್ಟಡದ ಮಾಲೀಕ ಶಂಭು ಎ.ಸನಿಲ್ ಆಗಮಿಸಿದ್ದರು.
ಸೊಸೈಟಿ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್, ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್, ಧನಂಜಯ ಮಟ್ಟು, ಗೌತಮ್ ಜೈನ್, ಗಣೇಶ ಪ್ರಸಾದ್ ದೇವಾಡಿಗ, ಜೈಕೃಷ್ಣ ಕೋಟ್ಯಾನ್, ಡಾ. ಶೆರಿಲ್ ಆಯೋನಾ ಐಮನ್, ರೇಖಾ ಶೆಟ್ಟಿ, ಹರೀಶ್ ಎನ್. ಪುತ್ರನ್ ಸಸಿಹಿತ್ಲು, ನವೀನ್ ಸಾಲ್ಯಾನ್ ಪಂಜ, ಮೋಹನ ದಾಸ್, ಅನಿಲ್ ಪೂಜಾರಿ ಸಸಿಹಿತ್ಲು, ರಜಿಯಾ ಬಾನು ಮತ್ತು ಕರಿಯ ಕಾಡಿಗ, ಉಡುಪಿ ಶಾಖಾ ಪ್ರಬಂಧಕಿ ನಿಶಾ ಸುಹೈಲ್ ಡೇನಿಯಲ್ ಮೊದಲಾದವರಿದ್ದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಪ್ರಕಾಶ್ ಆಚಾರ್ಯ ಕಿನ್ನಿಗೋಳಿ ನಿರೂಪಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಮತ್ತು ಬಡಗಬೆಟ್ಟು ಕೋ ಆಪರೇಟಿವ್ ಸೊಸೆ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, , ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್ ಜತ್ತನ್ನ, ಹೈಟೆಕ್ ಮೆಡಿಕೆರ್ ಹಾಸ್ಪಿಟಲ್ ಉಡುಪಿ ಎಂ.ಡಿ. ಡಾ. ಟಿ.ಎಸ್. ರಾವ್ ಸಂಸ್ಥೆಗೆ ಭೇಟಿ ನೀಡಿ ಶುಭ ಹಾರೈಸಿದರು.
.jpg)
.jpg)
.jpg)
.jpg)
.jpg)
.jpg)
.jpg)