ಸೌಹಾರ್ದತೆಗಾಗಿ ಅಧ್ಯಕ್ಷರೊಂದಿಗೆ ಸಭೆ

ಲೋಕಬಂಧು ನ್ಯೂಸ್ ಉಡುಪಿ
ಸಮಾಜದಲ್ಲಿ ಕೋಮು ಸೌಹಾರ್ದತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವ ಬಗೆಯ ಕುರಿತು ಎಲ್ಲಾ ಅಕಾಡೆಮಿಗಳ ಅಧ್ಯಕ್ಷರೊಂದಿಗೆ ಶೀಘ್ರ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಹೇಳಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ ಸಮಾಜದಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಅಕಾಡೆಮಿಗಳ ಅಧ್ಯಕ್ಷರೊಂದಿಗೆ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.


ರಾಜ್ಯದಲ್ಲಿ ಸಾಗರೋತ್ತರ ಉದ್ಯೋಗ ಕೋಶ ಇದೆ ಎಂಬ ವಿಚಾರ ಬಹಳ ಮಂದಿಗೆ ತಿಳಿದಿಲ್ಲ. ಈ ಕೋಶ ವಿದೇಶಗಳಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡುತ್ತಿದೆ. ಆ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಅಗತ್ಯ ಇದೆ ಎಂದು ತಿಳಿಸಿದರು.