ಲೋಕಬಂಧು ನ್ಯೂಸ್ | ಕಾಪು
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸಮಾರಿಗುಡಿ ಮಾರಿಯಮ್ಮ ದೇವಿ ಸನ್ನಿಧಿಗೆ ಭೇಟಿ ನೀಡಿದರು.
ದೇವಸ್ಥಾನದಲ್ಲಿ ಚಂಡಿಕಾಯಾಗ ಸೇವೆ ನೀಡಿ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿ ದರ್ಶನ ಪಡೆದದರು.
ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯ ಮಾಧವ ಆರ್. ಪಾಲನ್ ಮೊದಲಾದವರಿದ್ದರು.
