ನ.1: ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಲೋಕಬಂಧು ನ್ಯೂಸ್ ಉಡುಪಿ
ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭ ನವೆಂಬರ್ 1ರಂದು‌ ನಡೆಯಲಿದೆ ಎಂದು ಸಂಘದ ಅಧ್ಯಕ್ಷ, ವಕೀಲ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.ಅಂದು ಬೆಳಿಗ್ಗೆ 11.30ಕ್ಕೆ ಬ್ರಹ್ಮಗಿರಿಯ ಆದರ್ಶ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದಾರೆ.ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ,  ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸಹಕಾರ ಸಂಘಗಳ ಉಪ ನಿಬಂಧಕಿ ಲಾವಣ್ಯ ಕೆ.ಆರ್. ಮೊದಲಾದವರು ಭಾಗವಹಿಸುವರು ಎಂದವರು ತಿಳಿಸಿದ್ದಾರೆ.

ಸಂಘದ ಉಪಾಧ್ಯಕ್ಷ ಜಯನ್ ಮಲ್ಪೆ, ನಿರ್ದೇಶಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ, , ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶ್ಯಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫೀಕ್ ಖಾನ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್ ಮತ್ತು ವಿನಯ ಪ್ರಕಾಶ್, ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಉಪಸ್ಥಿತರಿರುವರು ಎಂದು ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.