ಲೋಕಬಂಧು ನ್ಯೂಸ್ | ಉಡುಪಿ
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 31ರಂದು ಸಂಜೆ 6.30ಕ್ಕೆ ನಗರದ ಮಿಷನ್ ಕಂಪೌಂಡ್'ನ ಯುಬಿಎಂಸಿ ಆಡಿಟೋರಿಯಂನಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಪ್ರಶಸ್ತಿ ಪ್ರದಾನ ಮಾಡುವರು. ಕಾರ್ಯಕ್ರಮವನ್ನು ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು ಎಂದು ಒಕ್ಕೂಟದ ಮಾಜಿ ಅಧ್ಯಕ್ಷ ಯಾಸಿನ್ ಮಲ್ಪೆ ತಿಳಿಸಿದರು.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು. ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಅಧ್ಯಕ್ಷತೆ ವಹಿಸುವರು ಎಂದರು.
ಸಾಮಾಜಿಕ ಹೋರಾಟಗಾರ, ನಟ ಪ್ರಕಾಶ್ ರಾಜ್ ಅವರಿಗೆ 'ಮಾನವ ರತ್ನ', ದುಬೈಯ ಉದ್ಯಮಿ ಹಿದಾಯತುಲ್ಲಾ ಅಬ್ಬಾಸ್ ಅವರಿಗೆ 'ಸೇವಾ ರತ್ನ' ಹಾಗೂ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸುರೇಶ್ ಭಟ್ ಬಾಕ್ರಬೈಲ್ ಅವರಿಗೆ 'ಸೌಹಾರ್ದ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು. ತಲಾ 50 ಸಾವಿರ ರೂ. ನಗದಿನೊಂದಿಗೆ ಪುರಸ್ಕರಿಸಲಾಗುವುದು.
ಜೊತೆಗೆ ವಿವಿಧ ಕ್ಷೇತ್ರಗಳ ಸಾಧಕರಾದ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ಬಿಪಿನ್ ಚಂದ್ರಪಾಲ್ ಕಾರ್ಕಳ, ಜೆರಾಲ್ಡ್ ಪಿಂಟೊ ಉಡುಪಿ, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಸಾಮಾಜಿಕ ಹೋರಾಟಗಾರ್ತಿ ಗೀತಾ ಸುರೇಶ್ ಕುಮಾರ್ ಬೈಂದೂರು ಮತ್ತು ಲೇಖಕಿ ಫಾತಿಮಾ ರಲಿಯಾ ಹೆಜಮಾಡಿ ಅವರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಉಚ್ಚಿಲ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ ಸನಿಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಉಡುಪಿ ಸಹಬಾಳ್ವೆ ಸಂಚಾಲಕ ಪ್ರೊ.ಫಣಿರಾಜ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಸ್.ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಕೆ.ಅಶ್ರಫ್, ತೀರ್ಥಹಳ್ಳಿ ಮುಸ್ಲಿಂ ಒಕ್ಕೂಟದ ಸುಲೈಮಾನ್ ಸಾಹೇಬ್, ನಾರ್ತ್ ಕೆನರಾ ಮುಸ್ಲಿಂ ಯುನೈಟೆಡ್ ಫೋರಂನ ಇಮ್ತಿಯಾಝ್ ಅಹ್ಮದ್ ಉಮರ್ ಶೇಖ್ ಭಾಗವಹಿಸುವರು ಎಂದು ಯಾಸಿನ್ ಮಲ್ಪೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಕಾರ್ಯಕ್ರಮ ಸಂಚಾಲಕ ಝಮೀರ್ ಅಹ್ಮದ್ ರಶಾದಿ, ಸಹಸಂಚಾಲಕ ಪೀರು ಸಾಹೇಬ್, ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು.
