ಲೋಕಬಂಧು ನ್ಯೂಸ್ ಉಡುಪಿ
ಜೈಲು ವಾರ್ಡನ್'ಗೆ ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.2011ರ ಡಿ.3ರಂದು ಹಿರಿಯಡ್ಕ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿದ್ದ ಸಫಾನ್ ಹುಸೇನ್ ಅಲಿಯಾಸ್ ರಜಾಕ್, ಕರ್ತವ್ಯದಲ್ಲಿದ್ದ ಜೈಲು ವಾರ್ಡನ್'ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಎಡ ಕೆನ್ನೆಗೆ ಹೊಡೆದಿದ್ದ. ಆ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿ 2012ರ ಜ.10ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ 2022ರ ಜೂ.24ರಂದು ಪ್ರಕರಣವನ್ನು ಎಲ್ಪಿಸಿ ಪ್ರಕರಣವಾಗಿ ದಾಖಲಿಸಲಾಗಿತ್ತು.
2026ರ ಏ.23ರಂದು ಆರೋಪಿಯನ್ನು ಬಾಡಿ ವಾರಂಟ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ನಡೆಯಿತು. ಸೆ.28ರಂದು ತೀಪರ್ು ಪ್ರಕಟಿಸಿದ ನ್ಯಾಯಾಲಯ ಸಫಾನ್ ಹುಸೇನ್ಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 40 ದಂಡ ವಿಧಿಸಿದೆ.