ಲೋಕಬಂಧು ನ್ಯೂಸ್ ಬೆಂಗಳೂರು
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಆರ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಪ್ರಕರಣದ ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಲೋಕೇಶ್ ಬಿ ಜಗಲಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ತನಿಖಾಖಾಧಿಕಾರಿಗೆ ಸಹಾಯಕ ತನಿಖಾ ಅಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ ನೇಮಕಗೊಂಡಿದ್ದಾರೆ. ಓರ್ವ ಐಪಿಎಸ್ ಮತ್ತು ಓರ್ವ ಕೆಎಸ್‌ಪಿಎಸ್ ಅಧಿಕಾರಿಗಳಿಂದ ತನಿಖೆ ನಡೆಯಲಿದೆ.