ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವದ ಐದನೆಯ ದಿನವಾದ ಗುರುವಾರ ಶ್ರೀ ಶಾರದಾಂಬೆಗೆ ಗರುಡವಾಹಿನಿ (ವೈಷ್ಣವಿ) ಅಲಂಕಾರ ಮಾಡಲಾಗಿತ್ತು.
ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ವಿಶೇಷ ಪೂಜೆ ನೆರವೇರಿಸಿದರು.