ಲೋಕಬಂಧು ನ್ಯೂಸ್ | ಶೃಂಗೇರಿ
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವದ ಏಳನೆಯ ದಿನವಾದ ಶನಿವಾರ ಶ್ರೀ ಶಾರದಾಂಬೆಗೆ ಇಂದ್ರಾಣಿ ಅಲಂಕಾರ ಮಾಡಲಾಗಿತ್ತು.
ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು ವಿಶೇಷ ಪೂಜೆ ನೆರವೇರಿಸಿದರು.
