ಲೋಕಬಂಧು ನ್ಯೂಸ್ | ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ ಅಂಗವಾಗಿ ಶುಕ್ರವಾರ ಮುದ್ದುಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಉಚ್ಚಿಲ ದಸರಾ ಪ್ರಧಾನ ವೇದಿಕೆ ಶಾಲಿನಿ ಡಾ.ಜಿ. ಶಂಕರ್ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ 3ರಿಂದ 9 ವರ್ಷದ 76 ಮಕ್ಕಳು ಶಾರದಾ ಮಾತೆಯ ವೇಷದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಮುದ್ದುಮಕ್ಕಳ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ಮಲ್ಪೆಯ ತಪಸ್ಯ ನಾಗಾಪ್ರಸಾದ್ ಪ್ರಥಮ, ಕಿದಿಯೂರಿನ ಸಾನಿಕ ದ್ವಿತೀಯ ಹಾಗೂ ಸುರತ್ಕಲ್ನ ಪ್ರಶ್ವಿ ಎಸ್. ಪುತ್ರನ್ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಅನುಕ್ರಮವಾಗಿ ರೂ. 8 ಸಾವಿರ, ರೂ. 6 ಸಾವಿರ ಹಾಗೂ 4 ಸಾವಿರ ರೂ. ನಗದು ಬಹುಮಾನ ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ತಲಾ 1,000 ರೂ. ಪ್ರೋತ್ಸಾಹಧನ ನೀಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಉಚ್ಚಿಲ ದಸರಾ ರೂವಾರಿ ನಾಡೋಜ ಡಾ.ಜಿ.ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ- ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಸಂಧ್ಯಾದೀಪ ಸುನಿಲ್, ಕವಿತಾ ಶರತ್, ದೇವಳದ ಪ್ರಬಂಧಕ ಸತೀಶ ಅಮೀನ್ ಪಡುಕೆರೆ ಮೊದಲಾದವರಿದ್ದರು.
.jpg)
.jpg)
.jpg)