ಉಡುಪಿ ಉಚ್ಚಿಲ ದಸರಾ: ಭಗವತೀ ಕಲ್ಪೋಕ್ತಪೂಜೆ

ಲೋಕಬಂಧು ನ್ಯೂಸ್ ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಪಂಚಮ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಶ್ರೀ ಮಾತಾ ಚಂದ್ರಘಂಟಾ ಆರಾಧನೆ ಮಾಡಲಾಯಿತು.ಶ್ರೀಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಶ್ರೀ ಶಾರದಾಮಾತೆ ಮತ್ತು ನವದುರ್ಗೆಯರಿಗೆ ಮಹಾಮಂಗಳಾರತಿ, ಮಹಾಪೂಜೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಸಲಾಯಿತು.
ಪ್ರಕಾಶ್ ಸುವರ್ಣ ಕಟಪಾಡಿ ಮತ್ತು ಬಳಗದವರಿಂದ ಭಕ್ತಿಗಾನಸುಧೆ, ಭಜನಾ ಸಂಕೀರ್ತನೆ, ಸುಮಂಗಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸಲಾಯಿತು.
ಸಂಜೆ ನವದುರ್ಗೆಯರಿಗೆ ಮಹಾಪೂಜೆ ನಡೆದು ಶ್ರೀ ಭಗವತೀ ಕಲ್ಪೋಕ್ತಪೂಜೆ ನಡೆಸಲಾಯಿತು. ಧಾರ್ಮಿಕ ಪ್ರವಚನ, ಮಂಗಳೂರಿನ ಸುಧಾಕರ್ ಮಂಗಳಾದೇವಿ ಅವರಿಂದ ಸ್ಯಾಕ್ಸೊಫೋನ್ ವಾದನ ಕಛೇರಿ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಉಚ್ಚಿಲ ದಸರಾ ರೂವಾರಿ ನಾಡೋಜ ಡಾ.ಜಿ.ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ- ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಸತೀಶ್ ಕುಂದರ್ ಮಲ್ಪೆ, ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್ ಅಮೀನ್, ಸಂಧ್ಯಾದೀಪ ಸುನಿಲ್, ಕವಿತಾ ಶರತ್, ದೇವಳದ ಪ್ರಬಂಧಕ ಸತೀಶ ಅಮೀನ್ ಪಡುಕೆರೆ ಮೊದಲಾದವರಿದ್ದರು.
ದಸರಾ ಮುಖ್ಯ ವೇದಿಕೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟ ನಡೆಯಿತು. ಸಾಂಸ್ಕೃತಿಕ ‌ಕಾರ್ಯಕ್ರಮದಂಗವಾಗಿ ಕೇರಳಂ ಸಿತಾನಿ ಭಜನ್ಸ್ ಅವರಿಂದ ಭಜನ್ ಫ್ಯೂಜನ್ ನಡೆಯಿತು.