ಉಡುಪಿ ಉಚ್ಚಿಲ ದಸರಾ: ಭಕ್ತಿಭಾವಪೂರ್ಣ ಕಲ್ಪೋಕ್ತಪೂಜೆ

ಲೋಕಬಂಧು ನ್ಯೂಸ್ ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಪಂಚಮ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವದ ಹತ್ತನೆಯ ದಿನವಾದ ಮಂಗಳವಾರ ಶ್ರೀ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಕಲ್ಪೋಕ್ತಪೂಜೆ ಮಾಡಲಾಯಿತು.ಶ್ರೀಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಬೆಳಿಗ್ಗೆ ಉದಯಪೂಜೆ, ನಿತ್ಯ ಚಂಡಿಕಾ ಹೋಮ, ಶ್ರೀ ಶಾರದಾಮಾತೆ ಮತ್ತು ನವದುರ್ಗೆಯರಿಗೆ ಮಹಾಮಂಗಳಾರತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಸಲಾಯಿತು.ದಸರಾ ಮುಖ್ಯ ವೇದಿಕೆಯಲ್ಲಿ ಭಜನಾ ಸಂಕೀರ್ತನೆ, ಧರ್ಮರಾಜ್ ಎರ್ಮಾಳ್ ಮತ್ತು ಬಳಗದವರಿಂದ ಭಕ್ತಿಗಾನಸುಧೆ ನಡೆಯಿತು.
ಸಂಜೆ ಧಾರ್ಮಿಕ ಪ್ರವಚನ, ಸುಮಂಗಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸಲಾಯಿತು. ಸುಧಾಕರ್ ಮಂಗಳಾದೇವಿ ಅವರಿಂದ ಸ್ಯಾಕ್ಸೊಫೋನ್ ವಾದನ ನಡೆಯಿತು. ರಾತ್ರಿ ಕಲ್ಪೋಕ್ತಪೂಜೆ, ಮಹಾಮಂಗಳಾರತಿ ನಡೆಸಲಾಯಿತು. ರಥಬೀದಿಯ ಸುತ್ತ ದಾಂಡಿಯಾ ರಾಸ್ ನೃತ್ಯ ಪ್ರದರ್ಶನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಉಚ್ಚಿಲ ದಸರಾ ರೂವಾರಿ ನಾಡೋಜ ಡಾ.ಜಿ.ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ- ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಸತೀಶ್ ಕುಂದರ್ ಮಲ್ಪೆ, ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್ ಅಮೀನ್, ಸಂಧ್ಯಾದೀಪ ಸುನಿಲ್, ಕವಿತಾ ಶರತ್, ದೇವಳದ ಪ್ರಬಂಧಕ ಸತೀಶ ಅಮೀನ್ ಪಡುಕೆರೆ ಮೊದಲಾದವರಿದ್ದರು.