ಉಡುಪಿ ಉಚ್ಚಿಲ ದಸರಾ: ಆಕರ್ಷಕ ವಿದ್ಯುದ್ದೀಪಾಲಂಕಾರ ಉದ್ಘಾಟನೆ

ಲೋಕಬಂಧು ನ್ಯೂಸ್ | ಪಡುಬಿದ್ರಿ
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರ ವರೆಗೆ ನಡೆಯುವ 5ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾದ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ಮಹೋತ್ಸವದ ರೂವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಶನಿವಾರ ಸಂಜೆ ಉದ್ಘಾಟಿಸಿದರು.
ಅದಕ್ಕೂ ಪೂರ್ವದಲ್ಲಿ ದೇವಳದ ಪ್ರಧಾನ ಅರ್ಚಕ ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ಶ್ರೀನಿವಾಸ ಉಪಾಧ್ಯಾಯ ಧಾರ್ಮಿಕ ವಿಧಿ ನೆರವೇರಿಸಿದರು.
ವಿದ್ಯುತ್ ದೀಪಾಲಂಕಾರ ನಿರ್ವಹಿಸಿದ ಅನಿಲ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ- ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಯಶಪಾಲ್ ಸುವರ್ಣ, ಮೋಹನ್ ಬೇಂಗ್ರೆ, ಶ್ರೀಪತಿ ಭಟ್ ಉಚ್ಚಿಲ, ದಿನೇಶ್ ಎರ್ಮಾಳು, ಮನೋಜ್ ಕಾಂಚನ್, ಸತೀಶ್ ಕುಂದರ್ ಮಲ್ಪೆ, ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ರತ್ನಾಕರ ಸಾಲ್ಯಾನ್ ಮಲ್ಪೆ, ವಿಶ್ವಾಸ್ ಅಮೀನ್ ಮೊದಲಾದವರಿದ್ದರು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪರಿಸರದಿಂದ ಪಡುಬಿದ್ರಿ ಮೂಲಕ ಕಾಪು ಸಮುದ್ರ ತೀರದ ವರೆಗೆ ಸುಮಾರು 10 ಕಿ.ಮೀ. ವರೆಗೆ ಆಯೋಜಿಸಲಾದ ಅತ್ಯಾಕರ್ಷಕ ವಿದ್ಯುದ್ದೀಪಾಲಂಕಾರ ಸಾರ್ವಜನಿಕರ ಕಣ್ಮನ ಸೆಳೆಯುತ್ತಿದ್ದು, ದಸರಾ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿದೆ.