ಲೋಕಬಂಧು ನ್ಯೂಸ್ ಕಾಪು
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರು ಶರನ್ನವರಾತ್ರಿ ಮಹೋತ್ಸವ ಸಂದರ್ಭದಲ್ಲಿ ನಡೆದ ಮಹಾಚಂಡಿಕಾ ಯಾಗದಂದು ಸಪತ್ನೀಕರಾಗಿ ಇಲ್ಲಿನ ಶ್ರೀ ಹೊಸ ಮಾರಿಗುಡಿ ಸನ್ನಿಧಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಅವರು ನವದುರ್ಗಾ ಲೇಖನ ಯಜ್ಞದ ಮಾಹಿತಿ ನೀಡಿದರು.ದೇವಳದ ನವದುರ್ಗಾ ಲೇಖನ ಮಂಟಪದಲ್ಲಿ ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸುವ ಮೂಲಕ ಲೇಖನ ಬರೆದರು.
ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದ ನೀಡಲಾಯಿತು.
ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಹಾಗೂ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.