ವೃಷಭವಾಹಿನಿ‌ ಶಾರದೆ

ಲೋಕಬಂಧು ನ್ಯೂಸ್ | ಶೃಂಗೇರಿ
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ಶ್ರೀ ಶಾರದಾ ಶರನ್ನವರಾತ್ರಿ ಮಹೋತ್ಸವ ಸಂದರ್ಭದಲ್ಲಿ ಮೂರನೆಯ ದಿನವಾದ ಮಂಗಳವಾರ ಶ್ರೀ ಶಾರದಾದೇವಿಯನ್ನು ವೃಷಭವಾಹಿನಿ ಅಲಂಕಾರ ಮಾಡಲಾಗಿತ್ತು.
ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಮತ್ತವರ ಕರಕಮಲಸಂಜಾತರಾದ ಜಗದ್ಗುರು ಶ್ರೀ ‌ವಿಧುಶೇಖರಭಾರತೀ ಸನ್ನಿಧಾನಂಗಳವರು ವಿಶೇಷ ಪೂಜೆ ನೆರವೇರಿಸಿದರು.